‌ಮಹದಾಯಿ ವಿಚಾರವಾಗಿ ನಾಳೆ (ಜ.25) ಕರ್ನಾಟಕ ಬಂದ್ ► ಶಾಲೆಗಳಿಗೆ ರಜೆ ನೀಡಲು ನಿರ್ಧಾರ



(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.24. ಮಹದಾಯಿ ವಿಚಾರದಲ್ಲಿ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರೆ ನೀಡಲಾಗಿರುವ ಜನವರಿ 25 ರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಆಡಳಿತ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಹೇಳಿದ್ದಾರೆ.





ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್ ಗೆ ಕರೆ ನೀಡಲಾಗಿದ್ದರೂ, ಬಂದ್ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗುವುದು. ಶನಿವಾರದಂದು ಪೂರ್ಣ ತರಗತಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.






error: Content is protected !!
Scroll to Top