ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜೂ. 25. ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸಹಿತ ಐವರನ್ನು ಅಮಾನತು ಮಾಡಲಾಗಿರುವ ಕುರಿತು ವರದಿಯಾಗಿದೆ.

ಬಿಹಾರ ಮೂಲದ ಕೈದಿಯೋರ್ವ ಠಾಣೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈಂ ಪಿಎಸ್​ಐ ಮಂಜೇಶ್ವರ್ ಚಂದಾವರ, ಸಿಬ್ಬಂದಿಗಳಾದ ಮಹಾವೀರ, ರಮೇಶ್ ಮತ್ತು ಸಂತೋಷ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪಾಲೀಷ್ ಮಾಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದಡಿ ಬಿಹಾರ ಮೂಲದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದ ವೇಳೆ ಓರ್ವ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಆರೋಪಿ ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.

Also Read  “ಮೀನಾಡಿ ಎಕ್ಸ್‌ಪ್ರೆಸ್‌’ ಆಗಿ ಬದಲಾದ ಮೀನಾಡಿ ಶಾಲೆ

error: Content is protected !!
Scroll to Top