ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ – News Kadaba

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 25. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಕೊಡಿಯಾಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ ಪಡೆಯುತ್ತಿರುವ ಸಂದರ್ಭ ಆಕೆ ಬೇರೆ ಬೇರೆ ಸಮಯದಲ್ಲಿ ಇನ್ನಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ ಹಿನ್ನೆಲೆ ಚೇತನ್ ಹಾಗೂ ದರ್ಶನ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಬೆಳ್ಳಾರೆ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Scroll to Top