ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಕಳೆದ ಐದು ತಿಂಗಳಿಂದ ಮಹಿಳಾ ಕುಸ್ತಿಪಟುಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವುದಾಗಿ ಕುಸ್ತಿಪಟುಗಳು ತಿಳಿಸಿದ್ದಾರೆ.

ಇನ್ನುಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದಿಲ್ಲ, ಪ್ರತಿಭಟನೆಯನ್ನು ನ್ಯಾಯಾಲಯಕ್ಕೆ ಸ್ಥಳಾಂತರಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ. ಸರಕಾರವು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಸಲ್ಲಿಸುವ ಭರವಸೆಯನ್ನು ಈಡೇರಿಸಿದೆ ಎಂದು ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಒಂದೇ ರೀತಿಯ ಟ್ವೀಟ್‌ ಗಳನ್ನು ಪೋಸ್ಟ್ ಮಾಡಿದ್ದಾರೆ. ಜೂನ್ ಆರಂಭದಲ್ಲಿ ಪೊಲೀಸರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಮತ್ತು ಹಿಂಬಾಲಿಸುವ ಆರೋಪಗಳನ್ನು ದಾಖಲಿಸಿದ ನಂತರ ಕುಸ್ತಿ ಪಟುಗಳು ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

Also Read  ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು

 

 

error: Content is protected !!
Scroll to Top