“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು. ಚುನಾವಣೆ ಸಂದರ್ಭ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ದೇಶದ ಪ್ರತಿಯೊಬ್ಬರಿಗೂ 15 ಲಕ್ಷ ರೂ. ನೀಡುತ್ತೇವೆ ಎಂದಿದ್ದ ಮೋದಿಯವರ ಮಾತು ಸುಳ್ಳಾಯಿತು. 9 ವರ್ಷದಲ್ಲಿ 18 ಕೋಟಿ ರೂ. ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಹೊಸ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಯುವಕರು ಕಳೆದುಕೊಳ್ಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದ್ದಾರೆ.

Also Read  ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ 'ಕದಂಬೋತ್ಸವ' ಉದ್ಘಾಟನೆ ➤ ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ತರಬೇತಿ ಶಿಬಿರ

 

 

 

 

error: Content is protected !!
Scroll to Top