ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಮುಂಬರುವ ತಾ.ಪಂ ಹಾಗೂ ಜಿ.ಪಂ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 04ರಂದು ಕೊನೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಲಾಗಿದೆ.

ದ.ಕ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಕಛೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದ್ದು, ಜುಲೈ 7ರಂದು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು. ಬಳಿಕ ಜುಲೈ 12ರಂದು ಅಗತ್ಯ ಬದಲಾವಣೆಗಳನ್ನು ಮಾಡಿಸಿ ಅಂತಿಮ ಚೆಕ್ ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶಿಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ

error: Content is protected !!