(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.24. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಶಾಲಾ ವಿದ್ಯಾರ್ಥಿಗಳು ಸೇರಿ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ಪರ್ವತಮುಖಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಸುಬ್ರಹ್ಮಣ್ಯದ ಶಾಲೆಯೊಂದರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಕ್ಕೆ ಪರ್ವತಮುಖಿ ಎಂಬಲ್ಲಿ ಮಾರುತಿ 800 ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.