ಮಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಕಂಡುಬಂದಲ್ಲಿ ಕಠಿಣ ಕ್ರಮ ➤ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪೊಲಿಸ್ ಇಲಾಖೆ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ತಳ ಮಟ್ಟದ ಯಾವುದೇ ಪೊಲೀಸರು ಭಾಗಿಯಾಗಿದ್ದು ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಇತ್ತೀಚೆಗೆ ನೀಡಿದ ಹೇಳಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ  ನನಗೆ ಅಂತಹ ಯಾವುದೇ ಮಾಹಿತಿ ದೊರಕಿಲ್ಲ.  ಈ ಬಗ್ಗೆ ಈಗಾಗಲೇ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಡ್ರಗ್ಸ್ ವಿಚಾರದಲ್ಲಿ ಯಾವುದೆ ಸಿಬ್ಬಂದಿ ಅಥವಾ ಅಧಿಕಾರಿಗಳು ಭಾಗಿಯಾಗಿರುವುದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಅಂತಹ ಯಾವುದೇ ರೀತಿಯ ಅಂಶ ಗಮನಕ್ಕೆ ಬಂದಲ್ಲಿಯೂ ತಾರಮತ್ಯವಿಲ್ಲದೆ ಕ್ರಮ ವಹಿಸಲಾಗುವುದು ಎಂದರು.

Also Read  ಪುತ್ತೂರು : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ಕಿ ಸಹಿತ ಲಾರಿ ಪೊಲೀಸ್ ವಶಕ್ಕೆ..!!

error: Content is protected !!