ಬಂದ್ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತ ► ಬಸ್ ಸಂಚಾರವಿಲ್ಲದೆ ಪರದಾಡಿದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.25. ಮಹದಾಯಿ ವಿಚಾರವಾಗಿ ಗುರುವಾರದಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಕರೆ ಅಷ್ಟೇನೂ ಪರಿಣಾಮ ಬೀಳುವುದಿಲ್ಲದಿದ್ದರೂ, ಸರಕಾರಿ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಿರುವುದು ಜನಸಾಮಾನ್ಯರನ್ನು ಪರದಾಡುವಂತೆ ಮಾಡಿದೆ. ಕೆಲವು ಶಾಲೆಗಳಲ್ಲಿ ಪರೀಕ್ಷೆ ಇದ್ದರೂ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಉಂಟಾಗಿದೆ.. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಸರಕಾರ ಪರೋಕ್ಷ ಬೆಂಬಲ ವ್ಯಕ್ತಪಡಿಸಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.

Also Read  ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

error: Content is protected !!
Scroll to Top