(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.28. ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರವು ಅಕ್ಕಿ ವಿತರಣೆಯಲ್ಲಿ ತಾರತಮ್ಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು ಪರ್ಯಾಯ ಹಾದಿ ಕಂಡುಕೊಂಡಿದ್ದಾರೆ.
ಇದೀಗ ಪ್ರತೀ 5 ಕೆಜಿ ಅಕ್ಕಿಯನ್ನು ವಿತರಿಸಿ, ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತೀ ಕೆಜಿಗೆ 34 ರೂಪಾಯಿಯಂತೆ ಮನೆಯ ಸದಸ್ಯರಿಗೆ ತಲಾ 5 ಕೆಜಿಯಂತೆ ಲೆಕ್ಕ ಹಾಕಿ ಹಣ ನೀಡಲಾಗುತ್ತದೆ. ಒಬ್ಬರಿಗೆ 5 ಕೆಜಿಯ ಅಕ್ಕಿ ಮೌಲ್ಯವನ್ನು ಹಣಕ್ಕೆ ಬದಲಿಸಿ 170 ರೂ. ಗಳನ್ನು ಕೊಟ್ಟ ಮಾತಿನಂತೆ ಜುಲೈನಿಂದಲೇ ಜಾರಿಗೊಳಿಸಲಾಗುವುದು. ಬಿಪಿಎಲ್ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದ್ದು, ಅಕ್ಕಿ ದಾಸ್ತಾನು ಆಗುವವರೆಗೆ ಹಣ ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.