ಆಳ್ವಾಸ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ► ಡೆತ್ ನೋಟ್ ಬರೆದಿಟ್ಟು ಐದನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.25. ಮೂಡುಬಿದಿರೆ ಆಳ್ವಾಸ್​ ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿನಿಯೋರ್ವಳು ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚಿತ್ರದುರ್ಗದ ರಚನಾ ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ರಚನಾ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top