(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.29. ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಕಡಬದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬದ ಕೋಡಿಂಬಾಳ ನಿವಾಸಿ ಅನೀಶ್ ಎಂದು ಗುರುತಿಸಲಾಗಿದೆ. ಆರೋಪಿಯು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಗಳೂರಿನ ಯುವತಿಯನ್ನು ಪ್ರೀತಿಸುವುದಾಗಿ ತಿಳಿಸಿ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುಮಾರು 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿಗೆ ಈ ಮೊದಲೇ ಮದುವೆಯಾಗಿರುವ ವಿಚಾರ ತಡವಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ತನಗಾಗಿರುವ ತೊಂದರೆಯ ಬಗ್ಗೆ ಮನೆಯವರಲ್ಲಿ ತಿಳಿಸಿದ ಯುವತಿಯು, ಬಳಿಕ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ 52/2023 ಕಲಂ 417, 376, 506 ಐಪಿಸಿ ಯಂತೆ ಕೇಸು ದಾಖಲಾಗಿರುತ್ತದೆ. ಆರೋಪಿ ಅನೀಶ್ ರೆಹಮಾನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2023 ಕಲಂ 27 ಬಿ.ಎನ್.ಡಿ.ಪಿ.ಎಸ್. ಆ್ಯಕ್ಟ್ ನಂತೆ ಕೂಡಾ ಪ್ರಕರಣ ದಾಖಲಾಗಿರುತ್ತದೆ.

