(ನ್ಯೂಸ್ ಕಡಬ) newskadaba.com ಕಡಬ, ಜೂ.30. ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಮರ್ಧಾಳದಿಂದ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿವಂಗತ ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ ಯಾಬೆ ಚುಮ್ಮ (38) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೆ ವೇಳೆಗೆ ತನ್ನ ಮನೆಯಲ್ಲಿದ್ದ ರಘುನಾಥ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

