(ನ್ಯೂಸ್ ಕಡಬ) newskadaba.com ಕಡಬ, ಜು.01. ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ.

ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿದ್ಯುತ್ ಆಘಾತದಿಂದ ಅಥವಾ ಯಾರಾದರೂ ಗುಂಡು ಹೊಡೆದಿದ್ದರಿಂದ ಕಾಡುಕೋಣ ಸತ್ತಿರಬಹುದೆಂದು ಶಂಕಿಸಲಾಗಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ.

