ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

➤ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಮಣಿಪಾಲ, ಜು. 01. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರದಂದು ತಡರಾತ್ರಿ ಸಂಭವಿಸಿದೆ.

ಮೃತ ವೈದ್ಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶುಕ್ರವಾರದಂದು ರಾತ್ರಿ ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪರಿಣಾಮ ತಲೆಗೆ ತೀವ್ರಗಾಯವುಂಟಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು
error: Content is protected !!
Scroll to Top