(ನ್ಯೂಸ್ ಕಡಬ) newskadaba.com ಕಡಬ, ಜು.01. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರದಂದು ಕಡಬ ಪೇಟೆಯಲ್ಲಿ ನಡೆದಿದೆ.

ಕಡಬದ ಫೆಡರಲ್ ಬ್ಯಾಂಕ್ ಮುಂಭಾಗ ಶನಿವಾರದಂದು ಶಾಲಾ ಬಾಲಾಕಿಯೋರ್ವಳು ಹಠಾತ್ ರಸ್ತೆ ದಾಟಿದಾಗ ಬಾಲಕಿಗೆ ಢಿಕ್ಕಿಯಾಗುವುದನ್ನು ಬೈಕ್ ಸವಾರ ತಪ್ಪಿಸಿದ ವೇಳೆ ವಿರುದ್ಧ ದಿಕ್ಕಿನಿಂದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಲ್ಲುಗುಡ್ಡೆ ನಿವಾಸಿ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಕೋಡಿಂಬಾಳ ನಿವಾಸಿ ಹರ್ಷಿತ್ ಹಾಗೂ ಎಡಮಂಗಲ ನಿವಾಸಿ ಮೋಹನ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಡಬದ 108 ಆಂಬ್ಯಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಶಾಲಾ ಬಾಲಕಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
