ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಅಮಿತ್ ಷಾ ವಾಗ್ದಾಳಿ ► ಬಂದ್ ನಡುವೆಯೂ ಮೈಸೂರಿಗೆ ಆಗಮಿಸಿದ‌ ಬಿಜೆಪಿ ರಾಷ್ಟ್ರಾಧ್ಯಕ್ಷ

(ನ್ಯೂಸ್ ಕಡಬ) newskadaba.com ಮೈಸೂರು, ಜ.25. ಮಹದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ ಹಾಗೂ ಸರಕಾರಿ ಬಸ್‌ಗಳ ಸಂಚಾರ ಸ್ಥಗಿತದ ಹೊರತಾಗಿಯೂ ಮೈಸೂರಿನಲ್ಲಿ ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಯಶಸ್ವಿಯಾಗಿ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅದನ್ನು ಹೇಳಲು ಹೋದರೆ ಎರಡು ದಿನಗಳು ಸಾಕಾಗದು ಎಂದು ಛೇಡಿಸಿದರು. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಪಣ ತೊಡುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ‌ನೀಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಭಾಗವಹಿಸಿದ್ದ ಈ ಸಮಾರಂಭದಲ್ಲಿ ವಾಹನ ಸಂಚಾರ ಇಲ್ಲದಿದ್ದರೂ ಸಾವಿರಾರು ಮಂದಿ ಭಾಗವಹಿಸಿದ್ದರು.

Also Read  ಸುಳ್ಯ: ಬಸ್ಸಿನಿಂದಿಳಿದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ..! ➤ KSRTC ಬಸ್ ಚಾಲಕ ನಿಧನ

error: Content is protected !!
Scroll to Top