(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 03. ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.

ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಎಂದು ಗುರುತಿಸಲಾಗಿದೆ.ಇವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
