➤ ಚಾಲಕ ಪವಾಡಸದೃಶ ಪಾರು
(ನ್ಯೂಸ್ ಕಡಬ) newskadaba.com ವಿಟ್ಲ, ಜು. 03. ವಿದ್ಯುತ್ ಕಂಬವೊಂದಕ್ಕೆ ಕಾರು ಢಿಕ್ಕಿ ಹೊಡೆದು, ಚಾಲಕ ಪವಾಡಸದೃಶ ಪಾರಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಲ್ಲಿದ್ದ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆಯೇ ಮುರಿದು ಬಿದ್ದಿದೆ. ಚಾಲಕ ಯಾವುದೇ ಅಪಾಯವಿಲ್ಲದೇ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

