(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆ ಮತ್ತು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್ ಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.
ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ ಸ್ಥಿತಿಗತಿ ಅರಿತುಕೊಂಡು ರಜೆ ಘೋಷಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯ ಜೊತೆ ಚರ್ಚೆ ನಡೆಸಬೇಕು ಎಂದು ಡಿಸಿ ನಿರ್ದೇಶಿಸಿದ್ದಾರೆ.