(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯ ಇಂದು ಐದು ತಾಲೂಕುಗಳಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕುಗಳ ಶಾಲಾ- ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು,ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರ್ ರವರಿಗೆ,ಅವರವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.
