(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಕಾಲೇಜು ವಿದ್ಯಾರ್ಥಿಯೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಸವೇಶ್ವರನಗರದ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ.

ಕೊಲೆಯಾದ ವಿದ್ಯಾರ್ಥಿಯನ್ನು ಸುಹೇಲ್ (17) ಎಂದು ಗುರುತಿಸಲಾಗಿದೆ. ಡ್ಯಾನ್ಸ್ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿ ಈ ಕೊಲೆ ನಡೆದಿದೆ ಎಂದೆನ್ನಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಆತ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
