(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
