(ನ್ಯೂಸ್ ಕಡಬ) newskadaba.com ಆಲಂಕಾರು, ಜು. 04. ಸ್ಕೂಟರ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆಲಂಕಾರು ಗ್ರಾಮದ ನೆಕ್ಕರೆ ಎಂಬಲ್ಲಿ ನಡೆದಿದೆ.

ಗಾಯಗೊಂಡ ಸವಾರನನ್ನು ಅಣ್ಣು ಯಾನೆ ಅಶೋಕ ಎಂದು ಗುರುತಿಸಲಾಗಿದೆ. ಅಶೋಕ್ ರವರು ಹಳೆನೇರೆಂಕಿ ಕಡೆಯಿಂದ ಸ್ಕೂಟರ್ ನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ಪಿಕಪ್ ವಾಹನವನ್ನು ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಚಲಾಯಿಸಿರುವುದೇ ಘಟನೆಗೆ ಕಾರಣ ಎಂಬುದಾಗಿ ವರದಿಯಾಗಿದೆ. ಘಟನೆಯಲ್ಲಿ ಆಕ್ಟಿವಾ ಸವಾರ ಅಶೋಕ್ ರವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಕುರಿತು ಕೋಡಿಲ ನಿವಾಸಿ ವಸಂತಿ ಎಂಬವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 62/2023 ಕಲಂ:279.337 ಐಪಿಸಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
