ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ.

ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ ದೂರು ದಾಖಲಿಸಿದ್ದಾರೆ.ಮೃತ ಮಗು ಜೀವಿತ್‌ನ ತಾಯಿ ಚಿತ್ರಾ ತಮ್ಮ ದೂರಿನಲ್ಲಿ, “ಜ್ವರದಿಂದ ಬಳಲುತ್ತಿದ್ದ ಮಗುವಿನೊಂದಿಗೆ ನಾನು ನನ್ನ ತವರು ಮನೆಗೆ ಹೋಗುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದಾಗ ಪತಿ ಶ್ರೀಧರ ಕೋಪಗೊಂಡು ಜಗಳವಾಡಿ ನನ್ನನ್ನು ತಳ್ಳಿದ ವೇಳೆ ನಾನು ಮಗುವಿನೊಂದಿಗೆ ಕೆಳಗೆ ಬಿದ್ದೆ. ನಂತರ ಮಗುವಿಗೆ ಜ್ವರ ಹೆಚ್ಚಾಯಿತು” ಎಂದು ತಿಳಿಸಿದ್ದಾರೆ.ಪೊಲೀಸರು ಶ್ರೀಧರ ನಾಯ್ಕ ಅವರನ್ನು ವಿಚಾರಿಸಿದ್ದು ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಇನ್ನಷ್ಟೇ ಬಿಡುಗಡೆ ಬರಬೇಕಾಗಿದೆ.

Scroll to Top