ಕಡಬ: ಪಕ್ಷ ವಿರೋಧಿ ಚಟುವಟಿಕೆ ಆರೋಪ ➤ ಮಜ್ಜಾರು ದೈವಗಳ ಮೊರೆಹೋದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಜು. 04. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಕೊನೆಗೆ ದೈವದ ಮೊರೆ ಹೋಗಿದ್ದಾರೆ.

ಜು. 04ರಂದು ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ. ಕೃಷ್ಣಪ್ಪ ಅವರ ಕುಮ್ಮಕ್ಕಿನಿಂದಲೇ ನಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ಮಾಡಿದ್ದೇವೆ ಎಂದಾದರೆ ಕೃಷ್ಣಪ್ಪ ಅವರು ಬಂದು ದೈವದ ಎದುರು ಪ್ರಮಾಣ ಮಾಡಲಿ ಎಂದು ಸವಾಲೆಸೆದಿದ್ದಾರೆ.

Also Read  ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

ನಾವು ಬೇರೆ ಯಾರನ್ನೂ ಬೆಂಬಲಿಸಿಲ್ಲ, ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ನಂದಕುಮಾರ್ ಅವರನ್ನು ಬೆಂಬಲಿಸಿದ್ದೇವೆ. ಅವರೇನು ಬೇರೆ ಪಕ್ಷದವರ, ಕಾಂಗ್ರೆಸ್ ಪಕ್ಷದವರಲ್ಲವೇ, ಅವರನ್ನು ಬೆಂಬಲಿಸಿದ ಕಾರಣ ನಾವು ಪಕ್ಷ ವಿರೋಧಿಗಳಾದ್ದೇವೆ. ಕಡಬ ಬ್ಲಾಕ್ ನಲ್ಲಿ ಕಾಂಗ್ರೆಸ್ ಬಲಪಡಿಸಲು ನಾವು ಸತತವಾಗಿ ದುಡಿದಿದ್ದೇವೆ. ಆದರೂ ನಮಗೆ ಅನ್ಯಾಯ ಮಾಡಲಾಗಿದೆ, ಅನ್ಯಾಯ ಮಾಡಿದವರಿಗೆ ಸರಿಯಾದ ಬುದ್ದಿ ದೈವವೇ ಕರುಣಿಸಲಿ ಎಂದು ದೈವದ ಮುಂದೆ ಕಾಂಗ್ರೆಸ್ ಮುಖಂಡರು ಕಣ್ಣೀರಿಟ್ಟಿದ್ದಾರೆ.

error: Content is protected !!
Scroll to Top