ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ➤ ‘ಮೋಸ ನಿಲ್ಲಿಸಿ – ಗ್ಯಾರಂಟಿ ಜಾರಿಗೊಳಿಸಿ’

 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ನಡೆಸಲಿದೆ.

‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದಾರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಇನ್ನು ಸದನದ ಹೊರಗೆ ಫ್ರೀಡಂಪಾರ್ಕ್​ನಲ್ಲಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ, ನಳಿನ್ ಕುಮಾರ್ ಕಟೀಲ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಒಟ್ಟಾರೆ ಸರ್ಕಾರದ 5 ಗ್ಯಾರಂಟಿ ಜಾರಿಗೊಲಿಸಳು ಒತ್ತಾಯಿಸಿ ಪ್ರತಿಭಟನೆ ಮೂಲಕ ಸರ್ಕಾರದ ಮೇಲೆ ಒತ್ತಡ ತಂತ್ರಕ್ಕೆ ಬಿಜೆಪಿ ಮುಂದಾಗಿದ್ದಾರೆ.

Also Read  ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ
error: Content is protected !!
Scroll to Top