(ನ್ಯೂಸ್ ಕಡಬ)newskadaba.com ಮಂಗಳೂರು, ಜು. 04. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಗ್ರಾಮಸ್ಥರು ಮನೆ ಕಳೆದುಕೊಂಡಿದ್ದು, ಪರಿಹಾರ ನೀಡದ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆ ಗುಡ್ಡ ಕುಸಿದು ಹನ್ನೊಂದು ಕುಟುಂಬ ಮನೆ ಕಳೆದುಕೊಂಡಿದ್ದರೂ ಇಲ್ಲಿಯವರೆಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಇಂದು ಗ್ರಾಮ ಸಭೆ ನಡೆಯದಂತೆ ಗ್ರಾಮದ ಜನತೆ ತಡೆದಿದ್ದಾರೆ, ಪರಿಹಾರ ಒದಗಿಸುವ ದಿನಾಂಕ ಮತ್ತು ಸಭೆ ಎಲ್ಲಾ ಅಧಿಕಾರಿಗಳು ಬಂದ್ರೆ ಮಾತ್ರ ಸಭೆ ನಡೆಸುವಂತೆ ಒತ್ತಾಯಿಸಿದ್ದಾರೆ.ಇನ್ನು ಇಪ್ಪತ್ತೆಂಟು ಅಧಿಕಾರಿಗಳ ಪೈಕಿ ಎಂಟು ಅಧಿಕಾರಿಗಳು ಸಭೆಗೆ ಹಾಜರಾಗಿದ್ದು, ಗೈರಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಗ್ರಾಮ ಸಭೆ ಮುಂದೂಡಲಾಗಿದೆ.
