(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 04. ಕಾಸರಗೋಡು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯ ಇಂದಿನ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಈ ಪರಿಸ್ಥಿತಿಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ರಾಜ್ಯ, ಸಿಬಿಎಸ್‌ಇ ಮತ್ತು ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜು. 05) ರಜೆ ಘೋಷಿಸಿದೆ.
