ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಹದಿನಾರನೇ ವಿಧಾನ ಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಜುಲೈ 05 ರಂದು ಈಗಾಗಲೇ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 06ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.

Also Read  ಪ.ಪಂಗಡ - ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವರೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

error: Content is protected !!
Scroll to Top