ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ.

ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಇವರು, ಮಂಗಳವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top