(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಭಾರೀ ಗಾಳಿಮಳೆಗೆ ಕಟ್ಟಡವೊಂದರ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು ಪರಿಣಾಮ ಕಟ್ಟಡದ ಕೆಳಗಡೆ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಬುಧವಾರದಂದು ಬಿಕರ್ನಕಟ್ಟೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದ್ದಾರೆ. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
