(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಪಠ್ಯದ ಜೊತೆಗೆ ಸಂಸ್ಕ್ರತಿ ಪಾಠ ಬೋಧಿಸುವ ಕಾರ್ಯವಾದಾಗ ಭವಿಷ್ಯದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಲು ಸಾಧ್ಯ. ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರೊಂದಿಗೆ ಪೋಷಕರು ಕೈ ಜೋಡಿಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್. ಗೌಡ ಹೇಳಿದರು.
ಅವರು ಕೊಯಿಲ ಗ್ರಾಮದ ಸಬಳೂರು ದ.ಕ.ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖಾ ಬಿ.ಅರ್.ಪಿ ಪ್ರದೀಪ್, ಸಿ.ಆರ್.ಪಿ. ಮಹೇಶ್, ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ, ಸದಸ್ಯರಾದ ತಿಮ್ಮಪ್ಪ ಗೌಡ ಸಂಕೇಶ, ಹರಿಣಿ ತುಂಬೆತಡ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಎರ್ಮಡ್ಕ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಶೇಖರ ಗೌಡ ಪಾಪುದ ಮಂಡೆ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯ ಪ್ರಶಸ್ತಿ ವಿಜೇತ ಏಣಿತಡ್ಕ 1 ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ.ಯಸ್. ಅವರನ್ನು ಸನ್ಮಾನಿಸಲಾಯಿತು.
ಮುಖ್ಯಶಿಕ್ಷಕಿ ವಾರಿಜ ಬಿ. ಪ್ರಸ್ತಾವಿಸಿ ವರದಿ ಮಂಡಿಸಿದರು. ಶಿಕ್ಷಕ ಪದ್ಮಯ್ಯ ಸ್ವಾಗತಿಸಿ, ಶಿಕ್ಷಕರಾದ ಶೇಖರ ಗೌಡ, ಮಮತಾ ನಿರೂಪಿಸಿದರು.