(ನ್ಯೂಸ್ ಕಡಬ) newskadaba.com ವಿಟ್ಲ , ಜು. 05. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು, ಅಪಾರ ನಷ್ಟ ಉಂಟಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ನಡೆದಿದೆ.

ಚಂದಳಿಕೆ ನಿವಾಸಿ ಕೃಷ್ಣಪ್ಪ ಮಡಿವಾಳ ಎಂಬವರ ಮನೆಗೆ ಕಾಂಪೌಂಡ್ ಕುಸಿದು ಬಿದ್ದಿದ್ದು, ಕೂಡಲೇ ಅವರು ವಿಟ್ಲ ಪಟ್ಟಣ ಪಂಚಾಯತ್ ವಿಕೋಪ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿ.ಕೆ. ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
