(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ.

2022ರಲ್ಲಿ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡಿನ ರಾಜೀವ್ ಗಾಂಧಿ ನಗರದ ಅಬ್ದುಲ್ ನಿಸಾರ್ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಆರೋಪಿಯು ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ವಾರಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ಜುಲೈ 4ರಂದು ಕಾಸರಗೋಡು ಕುಂಬಳೆಯಲ್ಲಿ ಸಂಪ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Also Read ಬಂಟ್ವಾಳದಲ್ಲೂ ಕಣದಿಂದ ಹಿಂದೆ ಸರಿದ ಎಸ್ಡಿಪಿಐ..?? ► ನಾಮಪತ್ರ ಹಿಂಪಡೆಯುತ್ತಾರಾ ರಿಯಾಝ್ ಫರಂಗಿಪೇಟೆ...!!
