ಸುಳ್ಯ: ಪರವಾನಿಗೆ ರಹಿತ ಓಡಾಟ. ➤ ಖಾಸಗಿ ಬಸ್ ಗಳನ್ನು ಸೀಝ್ ಮಾಡಿದ ಆರ್ ಟಿಒ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಅತೀ ಹಳೆಯ ಪರ್ಮಿಟ್ ಹೊಂದಿದ್ದ ಸುಳ್ಯ ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಈ ಹಿಂದಿನಿಂದಲೂ ಅಜ್ಜಾವರ-ಮಂಡೆಕೋಲು-ಅಡೂರುಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ ಅನಿಲ್ ಛಾತ್ರ ಎಂಬವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿದೆ. ಇನ್ನೊಂದು ಕೆಎ-19-ಸಿ-0329 ಎಂಬ ಸಂಖ್ಯೆಯ ಬಸ್ ನಿಂದ ಸುಮಾರು ಮೂವತ್ತೊಂಬತ್ತು ಸಾವಿರ ಟ್ಯಾಕ್ಸ್ ಉಳಿಕೆಯಾಗಿದ್ದು ಇವುಗಳಲ್ಲಿ ಒಂದು ಡಿಸೆಂಬರ್ ತಿಂಗಳಿನಲ್ಲಿ ಹಾಗೂ ಇನ್ನೊಂದು ಜನವರಿ ತಿಂಗಳಿನಲ್ಲಿ ಅವಧಿ ಮುಗಿದಿತ್ತು. ಈ ಬಸ್ಸುಗಳ ವಿರುದ್ದ ಆರ್ ಟಿ ಓ ಅಧಿಕಾರಿಗಳಿಗೆ ದೂರು ಬಂದ ಹಿನ್ನಲೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಈ ಎರಡೂ ಬಸ್ ಗಳನ್ನು ಸೀಝ್ ಮಾಡಲಾಗಿದೆ.

ಬಳಿಕ ಅವುಗಳನ್ನು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಪೋಲೀಸ್ ಸುಪರ್ದಿಗೆ ನೀಡಲಾಗಿದ್ದು, ಈ ಕುರಿತು ಕಾನೂನು ರೀತಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಹಾಗೂ ಪರವಾನಿಗೆ ಮಾಲಕರು ನೋಟಿಸ್ ಗೆ ಉತ್ತರ ಸಲ್ಲಿಸಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಆರ್ ಟಿ ಓ ದಾಳಿ ಸಂದರ್ಭ ಬಸ್ಸಿನ ಚಾಲಕರು ಬಸ್ಸಿನ ಯಾವುದೇ ಪರವಾನಿಗೆ ಪತ್ರ ನೀಡದ ಹಿನ್ನೆಲೆಯಲ್ಲಿ ಬಸ್ಸುಗಳನ್ನು ಸೀಝ್ ಮಾಡಲಾಗಿದೆ ಎಂದು ಅಧಿಕಾರಿಗಳಾದ ವಿಶ್ವನಾಥ್ ಅಜಿಲ ಹಾಗೂ ದೀಪಕ್ ರವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group