(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 05. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ತಡರಾತ್ರಿ ಬೀಸಿದ ಭಾರೀ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಆದರೆ ಇದರ ಅರಿವಿಲ್ಲದೇ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಆಕಸ್ಮಿಕವಾಗಿ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಂಟರಗಾಳಿಗೆ ವಿವಿಧೆಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
