ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ.

ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

error: Content is protected !!
Scroll to Top