ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ-ಅದಿ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 06. ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಎನ್‌ಕೆ ಶಾಫಿ ಸಅದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡಾ.ಮುಹಮ್ಮದ್ ಯೂಸುಫ್ ನಿಧನದ ಬಳಿಕ ಒಂದು ವರ್ಷ ವಕ್ಫ್ ಬೋರ್ಡ್ ಗೆ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಆನಂತರ ಬಿಜೆಪಿ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಹೊರಡಿಸಿತ್ತು, ಈ ಚುನಾವಣೆಯಲ್ಲಿ ಶಾಫಿ ಸ’ಅದಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದೀಗ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಝರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಮೇ. 22 ರಂದು ಆದೇಶ ಹೊರಡಿಸಿತ್ತು. ಆದರೆ ಒಂದೇ ದಿನದಲ್ಲಿ ಈ ಆದೇಶವನ್ನು ರದ್ದುಗೊಳಿಸಲಾಗಿತ್ತು.

Also Read  ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೋನಾ ➤ ಕಡಬದಲ್ಲಿ ಇಂದು 8 ಮಂದಿಯಲ್ಲಿ ಸೋಂಕು ದೃಢ

ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನವೀಕೃತಗೊಂಡಿರುವ ವಕ್ಫ್ ಬೋರ್ಡ್ ಕಚೇರಿಯ ಕಟ್ಟಡದ ಉದ್ಘಾಟನೆವರೆಗೆ ತಮ್ಮನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಶಾಫಿ ಸಅದಿ ಮನವಿ ಮಾಡಿದ್ದು ಅದರಂತೆ, ಜು. 03ರಂದು ನವೀಕೃತ ಕಟ್ಟಡ ಉದ್ಘಾಟನೆಯಾಗಿದ್ದು, ಈ ಹಿನ್ನಲೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top