ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Also Read  ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ

ಕಳೆದೆರಡು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ನಾಳೆಯೂ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಹಲವೆಡೆ ಹಾನಿ ಸಂಭವಿಸಿದೆ.

error: Content is protected !!
Scroll to Top