ಸುಳ್ಯ: ಮಳೆಯ ಅಬ್ಬರ- ಓರ್ವ ನೀರು ಪಾಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ಕೆಲಸ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಸಂಕದಿಂದ ಜಾರಿ ಬಿದ್ದು ನೀರುಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಡೆದಿದೆ.

ನೀರುಪಾಲಾದವರನ್ನು ನಾರಾಯಣ ಎಂದು ಗುರುತಿಸಲಾಗಿದೆ. ಕೊಡಗು ಕಡೆಯಿಂದ ರಬ್ಬರ್ ಟ್ಯಾಪಿಂಗ್ ಕೆಳಸಕ್ಕೆ ಬಂದಿದ್ದ ನಾಲ್ವರು ಕೂಲಿಕಾರ್ಮಿಕರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾರಾಯಣ ಎಂಬವರು ಆಯ ತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆನ್ನಲಾಗಿದೆ. ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ , ಗ್ರಾಮ ಆಡಳಿತಾಧಿಕಾರಿ ಶರತ್ ಇತರರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ರಾಮಕುಂಜ: ನೇಣುಬಿಗಿದು ಆತ್ಮಹತ್ಯೆ
error: Content is protected !!
Scroll to Top