(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 07. ಮನೆಯೊಂದರ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಎಂಬಲ್ಲಿ ನಡೆದಿದೆ.

ಮೃತರನ್ನು ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಶಫಾ(20) ಅವರನ್ನು ರಕ್ಷಣೆ ಮಾಡಲಾಗಿದೆ.

ಗುಡ್ಡೆ ಕುಸಿದ ಬಳಿಕ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅದರಂತೆ ಮನೆ ದುರಸ್ಥಿ ಮಾಡಲು 1.20 ಲಕ್ಷ ಪರಿಹಾರ ನೀಡುವುದಾಗಿಯೂ ಘೋಷಿಸಿದ್ದಾರೆ. ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ತಾಲೂಕು ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
