(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ.

ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ ಸಂಜೆ ವೇಳೆಗೆ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದ ಹಿನ್ನೆಲೆಯಲ್ಲಿ ಶನಿವಾರದಂದು ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

