(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಇವರನ್ನು ಐಪಿಸಿ ಸೆಕ್ಷನ್ 304 (ಕೊಲೆಗೆ ಸಮಾನವಲ್ಲದ ನರಹತ್ಯೆ ಅಪರಾಧ) ಮತ್ತು 201(ಸಾಕ್ಷ್ಯ ನಾಶ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.