(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಕಡಬದ ಯುವಕನೋರ್ವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಕಾಣಿಯೂರು ಕಾಯ್ಮಣ ನಿವಾಸಿ ದಿವಾಕರ್ (36) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ದಿವಾಕರ್ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಶುಕ್ರವಾರದಂದು ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

