ಮೂರು ವಾಹನಗಳ ನಡುವೆ ಸರಣಿ ಅಪಘಾತ- ರಿಕ್ಷಾ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು. 08. ಮೂರು ವಾಹನಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಧರೆಗುಡ್ಡೆ ಎಂಬಲ್ಲಿ ನಡೆದಿದೆ.

ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನವು ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ ಹಂಗೊಟ್ಟು ಎಂಬಲ್ಲಿ ಬೊಲೇರೋ ಕಾರು ಹಾಗೂ ರಿಕ್ಷಾವೊಂದಕ್ಕೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು ವಾಹನಗಳಲಿದ್ದ ಸವಾರರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top