(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ ಸೆನ್ ಪೊಲೀಸರು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ರ ಮಾರ್ಗದರ್ಶನದಲ್ಲಿ ಸಿಸಿಬಿ, ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಸತೀಶ್ ಎಂ.ಪಿ. ಮತ್ತಿತರರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

