ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 09. ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.

ಅಪಘಾತದಲ್ಲಿ ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯವಾಗಿದೆ. ಎರಡೂ ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ತಲುಪುತ್ತಿದ್ದಂತೆ ಓಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್ ಕಾರು ಒಮ್ನಿ ಕಾರಿಗೆ ಢಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಓಮ್ನಿ ಕಾರನ್ನು ಸುಮಾರು ದೂರ ದೂಡಿಕೊಂಡು ಹೋಗಿದ್ದು, ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿದ್ದಾರೆ.

error: Content is protected !!

Join the Group

Join WhatsApp Group