(ನ್ಯೂಸ್ ಕಡಬ) newskadaba.com ಮಂಗಳೂರು, ಜು. 09. ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳ ಮೇಲೆ ಹರಿದಿದ್ದು, ಪರಿಣಾಮ ಮೂರು ಜಾನುವಾರುಗಳು ಸಾವನ್ನಪ್ಪಿವೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

