(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ ನೀಡಲಾಗುತ್ತಿದ್ದು, ನಮ್ಮ ರಾಜ್ಯದಲ್ಲಿ ಯಾವಾಗ ಜಾರಿಗೆ ಬರಬಹುದೆಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಮ್ಮ ರಾಜ್ಯದಲ್ಲಿ ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯನ್ನು ಪರಿಗಣನೆಗೆ ತೆಗೆದುಕೊಂಡು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಸರ್ಕಾರಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

